ರಾಜ್ಯ ಮಟ್ಟಕ್ಕೆ ಆಯ್ಕೆ: ಜೆಇಎಂ ವಿದ್ಯಾರ್ಥಿಗಳ ಸಾಧನೆ
ಕಳಸ:ಕಳೆದ ಹಲವಾರು ವರ್ಷಗಳಿಂದ ಕ್ರೀಡಾ ಕೇತ್ರದಲ್ಲಿ ಸಾಧನೆ ತೋರುತ್ತಿರುವ ಇಲ್ಲಿನ ಜೆಇಎಂ ಶಾಲೆಯ ವಿದ್ಯಾರ್ಥಿಗಳು ಇದೀಗ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಚಿಕ್ಕಮಗಳೂರಿನಲ್ಲಿ ನಡೆದ 17 ವಯೋಮಾನದವರ ಜಿಲ್ಲಾ ಮಟ್ಟದ ಸ್ಪರ್ಧೆಯ ಬಾಲಕಿಯರ 3000 ಮೀಟರ್ ವೇಗದ ನಡಿಗೆಯಲ್ಲಿ ವಿದುಷ ಜೈನ್ ಮತ್ತು ಬಾಲಕರ 5000 ಮೀಟರ್ ನಡಿಗೆಯಲ್ಲಿ ಮೊಹಮ್ಮದ್ ಫಾರಿಸ್ ಅಗ್ರಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ.
ಶುಬೋಧ್ 400 ಮೀಟರ್ ಹರ್ಡಲ್ಸ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ, ಸೃಷ್ಟಿ ಜೈನ್ 200 ಮೀಟರ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ.
ಲಾಸ್ಯ 400 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ, 14 ವಯೋಮಿತಿಯ 600 ಮೀಟರ್ ಸ್ಫರ್ಧೆಯಲ್ಲಿ ಧನುಷ್ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ. ಸನಾ 400 ಮೀಟರ್ ಓಟ ಮತ್ತು ರಿಲೇಯಲ್ಲಿ ತೃತೀಯ ಸ್ಥಾನ ಗಳಿಸಿದ್ದಾಳೆ.
ವಿದ್ಯಾರ್ಥಿಗಳ ಈ ಸಾಧನೆಗೆ ಜೆಇಎಂ ಶಾಲಾ ಆಡಳಿತ ಮಂಡಳಿ, ಶಿಕ್ಷಕರು ಮತ್ತು ಪೋಷಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
