ಕಳಸ:ಗಂಗನಕೊಡಿಗೆ ಸರ್ಕಾರಿ ಪ್ರಾಥಮಿಕ ಶಾಲೆಯ ಆಶ್ರಯದಲ್ಲಿ ಸೋಮವಾರ ಕಳಸ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ನಡೆಯಿತು.


ಹೊರನಾಡಿನ ಜಿ.ಭೀಮೇಶ್ವರ ಜೋಷಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಮುಖಂಡರಾದ ಮಂಜಪ್ಪಯ್ಯ, ಸಂತೋಷ್, ಶ್ರೀನಾಥ್, ಕಳಸ ಪಂಚಾಯಿತಿ ಅಧ್ಯಕ್ಷೆ ಉಷಾ, ಉಪಾಧ್ಯಕ್ಷ ರಂಗನಾಥ್, ದಾನಿ ಆರ್.ಜೆ.ಸಾಲ್ಡಾನಾ, ಶ್ರೀಧರ ಶೆಟ್ಟಿ, ಮುಖ್ಯೋಪಾಧ್ಯಾಯ ಕುಮಾರಸ್ವಾಮಿ ಇದ್ದರು.


ಆನಂತರ ನಡೆದ ವಿವಿಧ ಸ್ಪರ್ಧೆಗಳಲ್ಲಿ ಗ್ರಾಮೀಣ ಪ್ರದೇಶದ ಮಕ್ಕಳು ಉತ್ಸಾಹದಿಂದ ಭಾಗವಹಿಸಿದರು.ಅಭಿನಯ ಗೀತೆ, ಛದ್ಮವೇಷ, ಚಿತ್ರಕಲೆ, ಮಣ್ಣಿನ ಮಾದರಿ ರಚನೆ ಮುಂತಾದ ಸ್ಪರ್ಧೆಗಳನ್ನು ಸ್ಥಳೀಯರು ಕೂಡ ವೀಕ್ಷಿಸಿ ಪ್ರೋತ್ಸಾಹಿಸಿದರು.
