ಕಳಸ:ಅಜ್ಜಂಪುರದಲ್ಲಿ ಶನಿವಾರ ನಡೆದ ಜಿಲ್ಲಾ ಮಟ್ಟದ ಪ್ರೌಢಶಾಲೆಗಳ ಕ್ರೀಡಾಕೂಟದಲ್ಲಿ ಇಲ್ಲಿನ ಜೆಇಎಂ ಶಾಲೆಯ ವಿದ್ಯಾರ್ಥಿಗಳು ಉತ್ತಮ ಪ್ರದರ್ಶನ ನೀಡಿ ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ.
5 ಕಿ.ಮೀ ನಡಿಗೆ ಸ್ಪರ್ಧೆಯಲ್ಲಿ 10ನೇ ತರಗತಿಯ ಸಮೃದ್ಧ ಅಗ್ರಸ್ಥಾನ ಗಳಿಸಿದರೆ,ಮೊಹಮ್ಮದ್ ಫಾರಿಸ್ ಮೂರನೇ ಸ್ಥಾನ ಗಳಿಸಿದ್ದಾನೆ. 3 ಕಿ.ಮೀ ನಡಿಗೆಯಲ್ಲಿವಿದುಷ ಜೈನ್ ಎರಡನೇ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಅರ್ಹತೆ ಗಳಿಸಿದರು.

100 ಮೀಟರ್ ರಿಲೇ ಸ್ಪರ್ಧೆಯಲ್ಲಿ ಸುಜಿತ್ ಶೆಟ್ಟಿ, ಶಮಂತ್, ಧನುಷ್ ಜೈನ್ ಮತ್ತು ಅಕ್ಷಯ್ ಜೈನ್ ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದರು.800 ಮೀಟರ್ ಓಟದಲ್ಲಿ ಮಾನ್ವಿ ಶೆಟ್ಟಿ ತೃತೀಯ ಸ್ಥಾನ ಪಡೆದರು.

ಶಾಲೆಯ ಶಿಕ್ಷಕ ಪ್ರಶಾಂತ್ ಮಕ್ಕಳಿಗೆ ತರಬೇತಿ ನೀಡಿದ್ದರು. ಕ್ರೀಡಾಪಟುಗಳ ಸಾಧನೆಗೆ ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಶಾಲಾ ಆಡಳಿತ ವರ್ಗ ಮೆಚ್ಚುಗೆ ವ್ಯಕ್ತಪಡಿಸಿದೆ.
