ಕಳಸ:ಇಲ್ಲಿನ ಜೆಇಎಂ ಪ್ರೌಢಶಾಲೆಯ ವಿದ್ಯಾರ್ಥಿನಿಯರಾದ ವಿದುಷಾ ಜೈನ್ ಮತ್ತು ಮಾನ್ವಿ ವಿ. ಶೆಟ್ಟಿ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ ಆಗಿದ್ದಾರೆ.
ಹರಿಹರಪುರದಲ್ಲಿ ಶನಿವಾರ ನಡೆದ ಜಿಲ್ಲಾ ಮಟ್ಟದ ಪ್ರೌಢಶಾಲೆಗಳ ಕ್ರೀಡಾಕೂಟದ 3000 ಮೀಟರ್ ನಡಿಗೆ ಸ್ಪರ್ಧೆಯಲ್ಲಿ 9ನೇ ತರಗತಿಯ ವಿದ್ಯಾರ್ಥಿನಿ ವಿದುಷಾ ಜೈನ್ ಅಗ್ರಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿದ್ದಾಳೆ.


10ನೇ ತರಗತಿ ವಿದ್ಯಾರ್ಥಿನಿ ಮಾನ್ವಿ ಆರ್.ಶೆಟ್ಟಿ 400 ಮೀಟರ್ ಓಟದಲ್ಲಿ ಮೊದಲ ಸ್ಥಾನ ಗಳಿಸಿ ರಾಜ್ಯ ಮಟ್ಟದಲ್ಲಿ ಭಾಗವಹಿಸುವ ಅರ್ಹತೆ ಪಡೆದಿದ್ದಾಳೆ.
