ಕಳಸ:ವಸತಿರಹಿತರಿಗೆ 94 ಸಿ ಅರ್ಜಿ ಸಲ್ಲಿಸಲು ಮತ್ತೆ ಅವಕಾಶ ಕಲ್ಪಿಸಬೇಕು ಎಂದು ಯುವ ಮುಖಂಡ ಪ್ರವೀಣ್ ಹೆಮ್ಮಕ್ಕಿ ಆಗ್ರಹಿಸಿದ್ದಾರೆ.
ಕಳಸ ತಾಲ್ಲೂಕಿನ ದೊಡ್ಡ ಸಂಖ್ಯೆಯ ಬಡವರು ಸ್ವಾತಂತ್ರ್ಯ ಬಂದು 78 ವರ್ಷವಾದರೂ ಸ್ವಂತ ಸೂರು ಇಲ್ಲದೆ ಸಂಕಷ್ಟದಲ್ಲಿದ್ದಾರೆ. ಬಡ ಕೂಲಿ ಕಾರ್ಮಿಕರು, ಬುಡಕಟ್ಟು ಜನಾಂಗದವರು, ಪರಿಶಿಷ್ಟ ಜಾತಿ ವರ್ಗದವರಿಗೆ ಈವರೆಗೂ ಹಕ್ಕುಪತ್ರ ಸಿಕ್ಕಿಲ್ಲ.
ಬಡ ಕೂಲಿ ಕಾರ್ಮಿಕರು ಸರ್ಕಾರಿ ಭೂಮಿಯಲ್ಲಿ ಸಣ್ಣ ಮನೆ ನಿರ್ಮಿಸಿಕೊಂಡಿದ್ದಾರೆ. ಅವರಿಗೆ ಹಿಂದಿನ ಬಾರಿ ಅರ್ಜಿ ಸಲ್ಲಿಸಲು ಮಾಹಿತಿ ಕೊರತೆ ಇತ್ತು.ಆದ್ದರಿಂದ ಈ ಬಡವರಿಗೆ ಈ ಬಾರಿ ಮತ್ತೆ ಅರ್ಜಿ ಸಲ್ಲಿಸಲು ಸರ್ಕಾರ ಅವಕಾಶ ಕಲ್ಪಿಸಿ ಬುಡಕಟ್ಟು ಸಮುದಾಯದವರಿಗೆ ಮತ್ತು ಕೂಲಿ ಕಾರ್ಮಿಕರಿಗೆ ಹಕ್ಕು ಪತ್ರ ಸಿಗಲು ಸಹಕಾರ ಕೊಡಬೇಕು ಎಂದು ಸರ್ಕಾರವನ್ನು ಆಗ್ರಹಿಸಿದ್ದಾರೆ.
