ಕಳಸ:ಪಟ್ಟಣದಲ್ಲಿ ಇದೇ 11ರಂದು ಬೃಹತ್ ಹಿಂದೂ ಸಮಾಜೋತ್ಸವ ಹಮ್ಮಿಕೊಳ್ಳಲಾಗಿದೆ.
ಹಿಂದೂ ಸಮಾಜವು ಎದುರಿಸುತ್ತಿರುವ ಸವಾಲುಗಳಿಗೆ ಅಂತ್ಯಹಾಡಿ, ಸದೃಢ ಮತ್ತು ಸಾಮರಸ್ಯಪೂರ್ಣ ಸಮಾಜವನ್ನು ನಿರ್ಮಿಸುವ ನಿಟ್ಟಿನಲ್ಲಿ ಹಿಂದೂ ಜನ ಜಾಗೃತಿಗಗಾಗಿ ಈ ಸಮಾಜೋತ್ಸವ ಆಯೋಜಿಸಲಾಗುತ್ತಿದೆ ಎಂದು ಹಿಂದೂ ಸಮಾಜೋತ್ಸವದ ಆಯೋಜನಾ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
11ರ ಭಾನುವಾರ ಮಧ್ಯಾಹ್ನ 3 ಗಂಟೆಗೆ ಕಳಸೇಶ್ವರ ದೇವಸ್ಥಾನದಿಂದ ಆರಂಭಿಸಿ ಪಟ್ಟಣದ ಮುಖ್ಯ ರಸ್ತೆಗಳಲ್ಲಿ ಶೋಭಾಯಾತ್ರೆ ನಡೆಸಲಾಗುತ್ತದೆ. ಸಂಜೆ 5 ಗಂಟೆಗೆ ದುರ್ಗಾ ಮಂಟಪದಲ್ಲಿ ಸಾರ್ವಜನಿಕ ಸಭೆ ನಡೆಸಲಾಗುತ್ತದೆ. ಹೊರನಾಡಿನ ಜಿ.ಭೀಮೇಶ್ವರ ಜೋಷಿ, ಸಮಾಜೋತ್ಸವ ಆಯೋಜನ ಸಮಿತಿ ಅಧ್ಯಕ್ಷ ರಘುನಾಥ ಕೆಸುವಿನಹಕ್ಲು ಭಾಗವಹಿಸಲಿದ್ದಾರೆ. ಶಿವಮೊಗ್ಗದ ಸಾಮಾಜಿಕ ಕಾರ್ಯಕರ್ತ ಯಾದವಕೃಷ್ಣ ದಿಕ್ಸೂಚಿ ಭಾಷಣ ಮಾಡಲಿದ್ದಾರೆ.
