ಕಳಸ:ರಾಜ್ಯ ಸರ್ಕಾರ ಹವ್ಯಕ ಭಾಷಾ ಅಕಾಡೆಮಿ ಸ್ಥಾಪಿಸಿರುವುದನ್ನು ಹೊರನಾಡಿನ ಅನ್ನಪೂರ್ಣೇಶ್ವರಿ ದೇವಸ್ಥಾನದ ಮುಖ್ಯಸ್ಥ ಜಿ.ಭೀಮೇಶ್ವರ ಜೋಷಿ ಸ್ವಾಗತಿಸಿದ್ದಾರೆ.
ನಾಡಿನ ಭಾಷಾ ಸಂಸ್ಕøತಿಯ ಅಂಗವಾಗಿರುವ ಹವ್ಯಕ ಭಾಷೆಯ ಬೆಳವಣಿಗೆಗೆಂದು ಅಕಾಡೆಮಿ ಸ್ಥಾಪಿಸುವ ಬಗ್ಗೆ ಪತ್ರಕರ್ತ ವಿಶ್ವೇಶ್ವರ ಭಟ್ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಒತ್ತಾಯಿಸಿದ್ದರು. ಇದನ್ನು ಒಪ್ಪಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹವ್ಯಕ ಭಾಷಾ ಅಕಾಡೆಮಿ ಸ್ಥಾಪಿಸುವ ಬಗ್ಗೆ ರಾಜ್ಯ ಬಜೆಟ್ ನಲ್ಲಿ ಪ್ರಕಟಿಸಿದ್ದಾರೆ.
ಇದರಿಂದ ಈ ಭಾಷೆಗೆ ಅನುಕೂಲ ಆಗಲಿದೆ. ವಿಶ್ವೇಶ್ವರ ಭಟ್ ಮತ್ತು ಸಿದ್ಧರಾಮಯ್ಯ ಅವರಿಗೆ ಅಭಿನಂದನೆಗಳು ಎಂದು ಭೀಮೇಶ್ವರ ಜೋಷಿ ತಿಳಿಸಿದ್ದಾರೆ.
