ಕಳಸ:ಹಳುವಳ್ಳಿಯಲ್ಲಿ ಬಿಜೆಪಿ ಪಕ್ಷದ ಕಳಸ ಮತ್ತು ಬಾಳೂರು ಮಹಾಶಕ್ತಿ ಕೇಂದ್ರಗಳ ಎರಡು ದಿನಗಳ ಪ್ರಶಿಕ್ಷಣ ವರ್ಗ ಶುಕ್ರವಾರ ಮುಕ್ತಾಯವಾಯಿತು.
ಕಾರ್ಯಕ್ರಮವನ್ನು ಮೂಡಿಗೆರೆ ಮಂಡಳ ಅಧ್ಯಕ್ಷ ಗಜೇಂದ್ರ ಕೊಟ್ಟಿಗೆಹಾರ ಉದ್ಘಾಟಿಸಿದರು.ಕಳಸ ಮಂಡಲ ಉಪಾಧ್ಯಕ್ಷ ನಾಗಭೂಷಣ ಪ್ರಾಸ್ತಾವಿಕ ಮಾತನಾಡಿದರು.
ಕಳಸ ಹಾಗೂ ಬಾಳೂರು ಬೂತ್ ಅಧ್ಯಕ್ಷರು, ಪದಾಧಿಕಾರಿಗಳು, ವಿವಿಧ ಶಕ್ತಿ ಕೇಂದ್ರದ ಅಧ್ಯಕ್ಷರು, ಮಹಾಶಕ್ತಿ ಕೇಂದ್ರದ ಅಧ್ಯಕ್ಷರು ಮತ್ತು ಸರ್ವ ಸದಸ್ಯರು, ಬಿಜೆಪಿಯ ವಿವಿಧ ಮೋರ್ಚಾಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಭಾಗವಹಿಸಿದ್ದರು.

ಸಮಾರೋಪ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಉಪಸಭಾಪತಿ ಎಂ.ಕೆ.ಪ್ರಾಣೇಶ್ ಮಾತನಾಡಿ, ಬಿಜೆಪಿಯು ತಳಮಟ್ಟದಿಂದ ಸಂಘಟನೆ ಮಾಡುವ ಉದ್ದೇಶದಿಂದ ಎರಡು ದಿನ ಈ ಅಭ್ಯಾಸ ವರ್ಗ ಆಯೋಜಿಸಿದೆ ಎಂದರು. ಜಿಲ್ಲೆಯ ಸಂಪನ್ಮೂಲ ವ್ಯಕ್ತಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನರೇಂದ್ರ, ಪುಣ್ಯಪಾಲ್, ಕಳಸ ಶಕ್ತಿ ಕೇಂದ್ರದ ಅಧ್ಯಕ್ಷ ಶ್ರೀಕಾಂತ್, ಮುಖಂಡರಾದ ದೀಪಕ್ ದೊಡ್ಡಯ್ಯ, ಶೇಷಗಿರಿ, ಮಂಜುನಾಥ್, ಗಿರೀಶ್ ಹೆಮ್ಮಕ್ಕಿ, ವೆಂಕಟಸುಬ್ಬಯ್ಯ, ಸುಜಯಾ ಸದಾನಂದ, ಮಂಡಳ ಪ್ರಧಾನ ಕಾರ್ಯದರ್ಶಿ ಲೋಕೇಶ್ ಮರ್ಕಲ್, ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ಮಹೇಶ್ ಬಸರೀಕಲ್ಲು, ಸುಂದರ ಶೆಟ್ಟಿ ಭಾಗವಹಿಸಿದ್ದರು.
