ಕಳಸ:ಇಲ್ಲಿನ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ವರ್ಷದ ಪದವಿ ತರಗತಿಗೆ ಪ್ರವೇಶ ಪಡೆಯುವ 50 ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶ ನೀಡುವುದಾಗಿ ಕಾಲೇಜಿನ ಆಡಳಿತ ಸಮಿತಿಯ ಕಾರ್ಯಾಧ್ಯಕ್ಷ ಹಿತ್ತಲಮಕ್ಕಿ ರಾಜೇಂದ್ರ ತಿಳಿಸಿದ್ದಾರೆ.
ಕಾಲೇಜಿನಲ್ಲಿ ಬಿ.ಎ. ಬಿ.ಕಾಂ. ಮತ್ತು ಈ ಬಾರಿ ಹೊಸದಾಗಿ ಬಿಸಿಎ ಪದವಿ ತರಗತಿಗಳಿಗೆ ಈಗ ಪ್ರವೇಶಾತಿ ಶುರು ಆಗಿದೆ. ಮೊದಲ ವರ್ಷದ ಪದವಿ ತರಗತಿಗೆ ಸೇರಲು ಬಯಸುವ ಅರ್ಹ ಮತ್ತು ಬಡ ವಿದ್ಯಾರ್ಥಿಗಳಿಗೆ ಕಾಲೇಜಿನ ಶುಲ್ಕವನ್ನು ನಾನು ಭರಿಸುತ್ತೇನೆ. ಇದು ಮೊದಲು ಪ್ರವೇಶ ಪಡೆಯುವ 50 ವಿದ್ಯಾರ್ಥಿಗಳಿಗೆ ಅನ್ವಯ ಆಗುತ್ತದೆ ಎಂದು ರಾಜೇಂದ್ರ ತಿಳಿಸಿದ್ದಾರೆ.

ಕಳಸ ಕಾಲೇಜಿನಲ್ಲಿ ಗುಣಮಟ್ಟದ ಶಿಕ್ಷಣ ಲಭ್ಯವಿದ್ದು ಗ್ರಾಮೀಣ ಪ್ರದೇಶದ ಮಕ್ಕಳಿಗೆ ಕಡಿಮೆ ವೆಚ್ಚದಲ್ಲೇ ಪದವಿ ಶಿಕ್ಷಣ ಲಭ್ಯವಿದೆ. ಈ ಅವಕಾಶವನ್ನು ಬಳಸಿಕೊಂಡು ವಿದ್ಯಾರ್ಥಿಗಳು ಪದವಿ ಪಡೆಯಬೇಕು ಎಂದು ಅವರು ಮನವಿ ಮಾಡಿದ್ದಾರೆ.
ಹೆಚ್ಚಿನ ಮಾಹಿತಿಗೆ ಕಳಸ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ವಿನಯ್ ಕುಮಾರ್ ಶೆಟ್ಟಿ ಅವರನ್ನು 9844247398 ಮೂಲಕ ಸಂಪರ್ಕಿಸಬಹುದಾಗಿದೆ.
