ಕಳಸ:ರಾಜ್ಯ ಮಟ್ಟದ ಸಹಕಾರ ರತ್ನ ಪ್ರಶಸ್ತಿ ವಿಜೇತರಾದ ಇಲ್ಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಜಿ.ಕೆ.ಮಂಜಪ್ಪಯ್ಯ ಅವರಿಗೆ ಫೆಬ್ರವರಿ 4ರಂದು ಅಭಿನಂದನಾ ಸಮಾರಂಭ ಏರ್ಪಡಿಸಲಾಗಿದೆ.
ವಿಧಾನಪರಿಷತ್ ಉಪಸಭಾಪತಿ ಎಂ.ಕೆ.ಪ್ರಾಣೇಶ್, ದಾನಿ ಜಗದೀಶ್ ಹೆಗ್ಗಡೆ, ಹೊರನಾಡಿನ ಜಿ.ಭೀಮೇಶ್ವರ ಜೋಷಿ, ರಾಜ್ಯ ಸೌಹಾರ್ದ ಸಂಯುಕ್ತ ಸುಕೋ ಬ್ಯಾಂಕ್ ಅಧ್ಯಕ್ಷ ಮನೋಹರ ಮಸ್ಕಿ, ವಿಧಾನ ಪರಿಷತ್ ಸದಸ್ಯ ಭೋಜೇಗೌಡ ಮತ್ತಿತರ ಸ್ಥಳೀಯ ಮುಖಂಡರು ಭಾಗವಹಿಸಲಿದ್ದಾರೆ.
ಇದೇ ಸಂದರ್ಭದಲ್ಲಿ ಸಂಘದ ನೂತನ ನಿರ್ದೇಶಕರನ್ನು ಕೂಡ ಅಭಿನಂದಿಸಲಾಗುತ್ತದೆ ಎಂದು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಹಾಬಲೇಶ್ವರ ತಿಳಿಸಿದ್ದಾರೆ.
