ಕಳಸ:ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಬಳಿ ಕಳಸ ತಾಲ್ಲೂಕಿನ ಅಭಿವೃದ್ಧಿ ಮತ್ತು ಕಳಸದಲ್ಲಿ ಇಂದಿರಾ ಕ್ಯಾಂಟೀನ್ ಸ್ಥಾಪನೆ ಬಗ್ಗೆ ಪ್ರಸ್ತಾಪ ಮಾಡಿದ್ದೇನೆ ಎಂದು ಶಾಸಕಿ ನಯನಾ ಮೋಟಮ್ಮ ತಿಳಿಸಿದ್ದಾರೆ.
ವಿಧಾನಸಭಾ ಅಧಿವೇಶನಕ್ಕೂ ಮುನ್ನ ಮುಖ್ಯಮಂತ್ರಿಗಳು ಶಾಸಕರ ಬಳಿ ನಡೆಸಿದ ಸಭೆಯಲ್ಲಿ ನನ್ನ ಕ್ಷೇತ್ರದ ಅಗತ್ಯಗಳ ಬಗ್ಗೆ ಮಾಹಿತಿ ಕೊಟ್ಟಿದ್ದೇನೆ.ವಿಶೇಷವಾಗಿ, ತಾಲ್ಲೂಕು ಕೇಂದ್ರವಾಗಿ 3 ವರ್ಷ ಕಳೆದರೂ ಕಳಸದಲ್ಲಿ ಅಗತ್ಯ ವ್ಯವಸ್ಥೆಗಳು ಆಗಿಲ್ಲ ಎಂಬುದನ್ನು ಮುಖ್ಯಮಂತ್ರಿಗಳ ಗಮನ ಸೆಳೆದಿದ್ದೇನೆ ಎಂದು ಅವರು ತಿಳಿಸಿದರು.
ಕಳಸ ತಾಲ್ಲೂಕಿನಲ್ಲಿ ಕೂಡ ಶೇ.50ಕ್ಕೂ ಹೆಚ್ಚು ಜನರು ಕೂಲಿ ಕಾರ್ಮಿಕರೇ ಇದ್ದಾರೆ.ಅವರ ಅನುಕೂಲಕ್ಕಾಗಿ ಕಳಸದಲ್ಲಿ ಇದಿರಾ ಕ್ಯಾಂಟೀನ್ ಆರಂಭಿಸಬೇಕು ಎಂದು ಮನವಿ ಮಾಡಿದ್ದೇನೆ.ಚಿಕ್ಕಮಗಳೂರು ಮತ್ತು ಮೂಡಿಗೆರೆಯ ಇಂದಿರಾ ಕ್ಯಾಂಟೀನ್ ಕಾರ್ಮಿಕರಿಗೆ ಬಹಳಷ್ಟು ಅನುಕೂಲ ತರುತ್ತಿದೆ ಎಂದೂ ನಯನಾ ಮೋಟಮ್ಮ ತಿಳಿಸಿದರು.
