ಕಳಸ:ಹೊರನಾಡಿನ ಅನ್ನಪೂರ್ಣೇಶ್ವರಿ ದೇವಸ್ಥಾನದ ಗ್ರಾಮೀಣಾಭಿವೃದ್ಧಿ ಯೋಜನೆಯ ಫಲಾನುಭವಿಗಳಿಗೆ ಆಗಸ್ಟ್ 2ರಂದು ಸವಲತ್ತುಗಳ ವಿತರಣಾ ಕಾರ್ಯಕ್ರಮ ನಡೆಯಲಿದೆ.
ಅನ್ನದಾಸೋಹ ಯೋಜನೆಯಲ್ಲಿ ಸರ್ಕಾರಿ ಶಾಲೆಗಳಿಗೆ ಮತ್ತು ಕೆಲ ದೇವಸ್ಥಾನಗಳಿಗೆ 25 ಸಾವಿರ ತಟ್ಟೆ ಲೋಟ ವಿತರಿಸಲಾಗುತ್ತದೆ. ಶೈಕ್ಷಣಿಕ ಅಭಿವೃದ್ಧಿ ಯೋಜನೆಯಲ್ಲಿ ಕಳಸ ತಾಲ್ಲೂಕಿನ ಶಾಲಾ ಮಕ್ಕಳಿಗೆ 15 ಸಾವಿರ ನೋಟ್ ಪುಸ್ತಕ ವಿತರಿಸಲಾಗುತ್ತದೆ.
ಇದೇ ಸಂದರ್ಭದಲ್ಲಿ ಪ್ರೌಢಶಾಲೆ, ಪದವಿಪೂರ್ವ ಕಾಲೇಜು ಮತ್ತು ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನೂ ನೀಡಲಾಗುತ್ತದೆ. ಇದರ ಜೊತೆಯಲ್ಲೇ ಹೊರನಾಡಿನ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ವಾರ್ಷಿಕ ಶಾಲಾ ಶುಲ್ಕವನ್ನೂ ವಿತರಿಸಲಾಗುತ್ತದೆ.
ಕಾರ್ಯಕ್ರಮದಲ್ಲಿ ಸಂಸದ ಕೋಟಾ ಶ್ರೀನಿವಾಸ ಪೂಜಾರಿ, ಶಾಸಕಿ ನಯನಾ ಮೋಟಮ್ಮ, ದೇವಸ್ಥಾನದ ಮುಖ್ಯಸ್ಥ ಜಿ.ಭೀಮೇಶ್ವರ ಜೋಷಿ ಮತ್ತಿತರ ಮುಖಂಡರು ಭಾಗವಹಿಸಲಿದ್ದಾರೆ ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ.
