ಕಳಸ:ಸಂಸೆಯ ಎಸ್ ಡಿ ಎಂ ಕೈಗಾರಿಕಾ ತರಬೇತಿ ಸಂಸ್ಥೆಯ ವಿದ್ಯಾರ್ಥಿಗಳು ಅಖಿಲ ಭಾರತ ಮಟ್ಟದ ವೃತ್ತಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶದ ಸಾಧನೆ ತೋರಿದ್ದಾರೆ.
ಕಳೆದ ಜುಲೈ ತಿಂಗಳಲ್ಲಿ ನಡೆದಿದ್ದ ಪರೀಕ್ಷೆಯಲ್ಲಿ ಸಂಸ್ಥೆಯ ಎಲೆಕ್ಟ್ರಿಷಿಯನ್, ಮೋಟಾರ್ ಮೆಕ್ಯಾನಿಕ್, ಫಿಟ್ಟರ್, ವೆಲ್ಡರ್, ಡೀಸೆಲ್ ಮೆಕ್ಯಾನಿಕ್ ವಿಭಾಗಗಳಲ್ಲಿ 177 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಈ ಪೈಕಿ ಎಲ್ಲರೂ ಉತ್ತೀರ್ಣರಾಗಿದ್ದು ಸಂಸ್ಥೆಗೆ ಹೆಮ್ಮೆ ತಂದಿದೆ ಎಂದು ಪ್ರಾಂಶುಪಾಲ ಸತೀಶ್ ಮಾಹಿತಿ ನೀಡಿದ್ದಾರೆ.
ಎಸ್ಡಿಎಂ ಸಂಸ್ಥೆಯು ಗ್ರಾಮೀಣ ಪ್ರದೇಶದಲ್ಲಿ ತಾಂತ್ರಿಕ ಶಿಕ್ಷಣ ನೀಡಿ ಕಿರಿಯ ವಯಸ್ಸಿನ ಯುವಕರಿಗೆ ಉದ್ಯೋಗ ಪಡೆಯಲು ಸಹಕಾರಿ ಆಗುತ್ತಿದೆ. ಈ ಬಗ್ಗೆ ಪೋಷಕರು ಮತ್ತು ಸಂಸೆ ಗ್ರಾಮಸ್ಥರು ಸಂಸ್ಥೆಯ ಕಾರ್ಯದರ್ಶಿಗಳು, ಬೋಧಕರು ಮತ್ತು ಇತರೆ ಸಿಬ್ಬಂದಿಯನ್ನು ಅಭಿನಂದಿಸಿದ್ದಾರೆ.
