ಕಳಸ:ತೋಟದೂರಿನ ಪ್ರತಿಷ್ಟಿತ ಕೃಷಿ ಕುಟುಂಬದ ಹಿರಿಯರಾಗಿದ್ದ ಟಿ.ಎಸ್.ಸುಬ್ರಮಣ್ಯ(86) ಸೋಮವಾರ ಬೆಳಿಗ್ಗೆ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.ಅವರು ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು.
ತೋಟದೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ, ಕಳಸ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಮತ್ತು 2 ಬಾರಿ ಕಳಸೇಶ್ವರ ದೇವಸ್ಥಾನದ ಕನ್ವೀನರ್ ಆಗಿ ಅವರು ಸೇವೆ ಸಲ್ಲಿಸಿದ್ದರು.ಅವರಿಗೆ ಪತ್ನಿ, ನಾಲ್ವರು ಪುತ್ರಿಯರು ಇದ್ದಾರೆ.
ಮೃತರ ಅಂತ್ಯಕ್ರಿಯೆ ಬೆಂಗಳೂರಿನಲ್ಲಿ ನಡೆದಿದೆ.

